ಲಕ್ನೋ : ಉತ್ತರ ಪ್ರದೇಶದ ಚುನಾವಣೆಯ ಫಲಿತಾಂಶ ನಮಗೊಂದು ಪಾಠವಾಗಿದ್ದು, ಭವಿಷ್ಯದಲ್ಲಿ ಮತ್ತೆ ಗೆಲ್ಲುತ್ತೇವೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಲ್ಲಿ ಬಹುಜನ ಸಮಾಜ ಪಕ್ಷವು ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದ್ದು, ಹೀನಾಯ ಸೋಲನ್ನು ಅನುಭವಿಸಿದೆ. ಇದೀಗ ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಯಾವತಿ ಅವರು,ಉತ್ತರ ಪ್ರದೇಶದ ಚುನಾವಣಾ ಫಲಿತಾಂಶಗಳು ಬಿಎಸ್ಪಿಯ ನಿರೀಕ್ಷೆಗಳಿಗೆ ವಿರುದ್ಧವಾಗಿವೆ. ಅದಕ್ಕೆ ನಾವು ಎದೆಗುಂದಬಾರದು. ಬದಲಾಗಿ