ಮಹಾರಾಷ್ಟ್ರದ ಮುಂಬೈ ಮತ್ತು ಗುಜರಾತ್ನ ಅಹಮದಾಬಾದ್ ನಡುವಿನ ದೇಶದ ಮೊದಲ ಬುಲೆಟ್ ರೈಲು ಹಳಿ ಮಾರ್ಗದಲ್ಲಿ ಮೊದಲ ಸುರಂಗ ನಿರ್ಮಾಣವು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೋರೇಶನ್ ಲಿಮಿಟೆಡ್ ತಿಳಿಸಿದೆ.ಗುಜರಾತ್ನ ವಲ್ಸದ್ ಜಿಲ್ಲೆಯ ಜರೋಲಿ ಗ್ರಾಮದ ಬಳಿ ಇರುವ ಈ ಸುರಂಗವನ್ನು ಹೊಸ ಆಸ್ಟ್ರಿಯನ್ ಸುರಂಗ ವಿಧಾನ ಬಳಸಿಕೊಂಡು ಪರ್ವತ ಕೊರೆದು 10 ತಿಂಗಳ ಅವಧಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸುರಂಗವು 350 ಮೀಟರ್ ಉದ್ದ, 12.6