ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಭಾರತೀಯ ಬಾಹ್ಯಾಕಾಶ ಸಂಘ (ISpA)ವನ್ನು ವರ್ಚ್ಯುವಲ್ ಆಗಿ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಅವರು, ಇನ್ನು ಮುಂದೆ ಸರ್ಕಾರ ಬಾಹ್ಯಾಕಾಶ ಕ್ಷೇತ್ರದ ನಿರ್ವಾಹಕನಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಈ ಕ್ಷೇತ್ರಕ್ಕೆ ನಿರಂತರವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ. ಹಾಗೇ, ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯಗಳ ಭಾಗವಹಿಸುವಿಕೆಯನ್ನು ಸರಳಗೊಳಿಸಲು ಸರ್ಕಾರ ಇನ್-ಸ್ಪೇಸ್ (IN-SPACe) ರಚಿಸಿದೆ. ಈ ಇನ್-ಸ್ಪೇಸ್