ನವದೆಹಲಿ : ಕಾಂಗ್ರೆಸ್ ಪಕ್ಷದಲ್ಲಿ ಅನಿರೀಕ್ಷಿತ ಬೆಳವಣಿಗೆಗಳ ನಡೆಯತೊಡಗಿದ್ದು, ಹೈಕಮಾಂಡ್ ವಿರುದ್ಧವೇ ಜಿ23 ನಾಯಕರು ಕಿಡಿಕಾರಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್ ಪಕ್ಷಕ್ಕೆ ಚುನಾಯಿತ ಅಧ್ಯಕ್ಷರೇ ಇಲ್ಲ. ಯಾರು ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ತಕ್ಷಣವೇ ಕಾರ್ಯಕಾರಿ ಸಮಿತಿ ಸಭೆ ಕರೆಯಬೇಕೆಂದು ಆಗ್ರಹಿಸಿದ್ದಾರೆ. ಈ ಮೂಲಕ ಹಿರಿಯ ನಾಯಕರು ಮತ್ತೆ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ