ನವದೆಹಲಿ: ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಬಿಕ್ಕಟ್ಟು ಇನ್ನು ಶಮನವಾಗಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದ ಸುಪ್ರೀಂ ಕೋರ್ಟ್ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸೋಮವಾರ ಮತ್ತೆ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಬಿಕ್ಕಟ್ಟು ಈಗ ಶಮನವಾಗಿದೆ ಎಂದು ಭಾರತೀಯ ವಕೀಲರ ಪರಿಷತ್ ತಿಳಿಸಿತ್ತು. ಆದರೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ಬಿಕ್ಕಟ್ಟು ಇನ್ನು ಬಗೆಹರಿದಿಲ್ಲ