ಚೆನ್ನೈ : ರಾಜಸ್ಥಾನ, ಛತ್ತಿಸ್ಗಢದ ನಂತರ ತಮಿಳುನಾಡು ಮತ್ತು ಬಿಹಾರದ ಕಾಂಗ್ರೆಸ್ ಘಟಕಗಳು ರಾಹುಲ್ ಗಾಂಧಿ ಅವರೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ನಿರ್ಣಯ ತೆಗೆದುಕೊಂಡಿವೆ.ಸೆಪ್ಟೆಂಬರ್ 22ರಂದು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಇಂದು ನಡೆದ ಟಿಎನ್ಸಿಸಿ (ತಮಿಳುನಾಡು ರಾಜ್ಯ ಕಾಂಗ್ರೆಸ್ ಸಮಿತಿ) ನಡೆದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.