ಕಳೆದೊಂದು ವರ್ಷದಿಂದ ದೆಹಲಿಯ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ಕೊನೆಗೊಳ್ಳುವ ಸಾಧ್ಯತೆ ಇದೆ. ವಿವಾದಿತ ಮೂರು ಕೃಷಿ ಮಸೂದೆ ರದ್ಧಾದ ಬಳಿಕವೂ ತಮ್ಮ ಪ್ರತಿಭಟನೆ ಮುಂದುವರೆಸಿದ್ದ ರೈತ ಸಂಘಟನೆಗಳು ಕನಿಷ್ಠ ಬೆಂಬಲ ಬೆಲೆ, ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರ ಮುಂದೆ ಇರಿಸಿದ್ದರು. ಈ ಕುರಿತು ನಿನ್ನೆ ದೆಹಲಿಯಲ್ಲಿ ಸರ್ಕಾರದ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ತಮ್ಮ