ಚೆನ್ನೈ : ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು ಕಾರ್ಮಿಕರ ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ. ಮೇ ಡೇ ಪಾರ್ಕ್ನಲ್ಲಿ ಮೇ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ಕಾರ್ಖಾನೆಗಳ ತಿದ್ದುಪಡಿ ಕಾಯಿದೆ 2023, ಕೈಗಾರಿಕೆಗಳಿಗೆ ದಿನಕ್ಕೆ 12 ಗಂಟೆ ಎಂದರೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಗಳವರೆಗೆ ಇದ್ದ ಕೆಲಸದ