ಜಮ್ಮು ಕಾಶ್ಮಿರದ ಅನಂತ್ನಾಗ್ ಜಿಲ್ಲೆಯಲ್ಲಿ ಪೊಲೀಸ್ ಬೆಂಗಾವಲು ಪಡೆಯ ವಾಹನಗಳ ಮೇಲೆ ನಡೆಸಿ ಉಗ್ರರ ಅಟ್ಟಹಾಸ ಮೆರೆದ ಘಟನೆ ವರದಿಯಾಗಿದೆ. ಪೊಲೀಸ್ ಬೆಂಗಾವಲು ಪಡೆಯ ವಾಹನಗಳ ಮೇಲೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿ, ಓರ್ವ ಪೊಲೀಸ್ ಸಿಬ್ಬಂದಿ ಹತನಾಗಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಪ್ರತಿಯಾಗಿ ಪೊಲೀಸ್ ಸಿಬ್ಬಂದಿ ಕೂಡಾ ಪ್ರತಿದಾಳಿ ನಡೆಸಿದಾಗ ಉಗ್ರರು ಪರಾರಿಯಾಗಿದ್ದಾರೆ