ಶಿವಮೊಗ್ಗದ ಜಿಲೆಟಿನ್ ಕಡ್ಡಿ ಸ್ಫೋಟ ದುರಂತ; ಪ್ರಧಾನಿ ಮೋದಿ ಸಂತಾಪ

ನವದೆಹಲಿ| pavithra| Last Modified ಶುಕ್ರವಾರ, 22 ಜನವರಿ 2021 (10:20 IST)
ನವದೆಹಲಿ : ಸಮೀಪದ ಹುಣಸೋಡು ಗ್ರಾಮದ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಹಿನ್ನಲೆಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ನಡೆದ ದುರಂತದಿಂದ ತುಂಬಾ ನೋವಾಗಿದೆ. ಮೃತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಗಾಯಗೊಂಡವರು ಬೇಗ ಚೇತರಿಸಿಕೊಳ್ಳುವಂತಾಗಲಿ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :