ನವದೆಹಲಿ : ನಾಲ್ವರು ರೈತರು ಸೇರಿ 8 ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ವ್ಯವಸ್ಥಿತ ದಾಳಿನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂಸಾಚಾರ ನಡೆದ ಲಖಿಂಪುರಕ್ಕೆ ಕಾಂಗ್ರೆಸ್ ನಿಯೋಗದ ಭೇಟಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರಾಕರಿಸಿದ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.