ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡಿತಿದೆ- ಬಸವರಾಜ ಬೊಮ್ಮಾಯಿ

ನವದೆಹಲಿ| pavithra| Last Modified ಗುರುವಾರ, 19 ಡಿಸೆಂಬರ್ 2019 (12:11 IST)
ನವದೆಹಲಿ : ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ
ಹೇಳಿದ್ದಾರೆ.ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಜನರನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ. ಸಿಎಎ ನಿಂದ ಮುಸ್ಲಿಂರಿಗೆ ಯಾವುದೇ ತೊಂದರೆ ಇಲ್ಲ. ಸುಳ್ಳನ್ನು ನಂಬಿ ಪ್ರತಿಭಟನೆ ಮಾಡಬೇಡಿ. ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :