ಲಕ್ನೋ : ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಪರವಾಗಿ ಮಮತಾ ಬ್ಯಾನರ್ಜಿ ಪ್ರಚಾರ ನಡೆಸುತ್ತಿದ್ದಾರೆ. ಗುರುವಾರ ವಾರಣಾಸಿಯಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.ಈ ಹಿಂದೆಯೂ ನನ್ನ ಮೇಲೆ ಹಲವಾರು ಬಾರಿ ದಾಳಿ ನಡೆದಿದೆ. ದೊಣ್ಣೆಯಿಂದ ಹೊಡೆದಿದ್ದಾರೆ.