ಕೊರೊನಾ ಮೂರನೇ ಅಲೆ ಅಕ್ಟೋಬರ್ ವೇ ಳೆಗೆ ಗರಿಷ್ಠ ಪ್ರಮಾಣ ತಲುಪಲಿದ್ದು, ಮಕ್ಕಳನ್ನು ಹೆಚ್ಚಾಗಿ ಕಾಡಲಿದೆ ಎಂದು ತಜ್ಞರು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ಎಚ್ಚರಿಸಿದ್ದಾರೆ. ಕೇಂದ್ರ ಸರಕಾರ ನಿಯೋಜಿಸಿದ್ದ ಸಮಿತಿ ಮಂಗಳವಾರ ಈ ವರದಿ ನೀಡಿದ್ದು, ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಿಕೊಳ್ಳಬೇಕು. ಅದರಲ್ಲೂ ಮಕ್ಕಳಿಗೆ ತುರ್ತಾಗಿ ಚಿಕಿತ್ಸೆ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದೆ. ವೈದ್ಯಕೀಯ ಕ್ಷೇತ್ರದ ತಜ್ಞರನ್ನೊಳಗೊಂಡ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣೆ ಸಂಸ್ಥೆ (ಎನ್ ಐಡಿಎಂ) ಸಮಿತಿ ಇದಾಗಿದ್ದು,