ನವದೆಹಲಿ : ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ. ವಿಶೇಷವಾಗಿ ಕರ್ನಾಟಕ ಜನರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸ್ಪಷ್ಟವಾಗಿ ಬಹುಮತ ತಂದಿದ್ದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ಈ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾಗಿತ್ತು. ಹೀಗಾಗಿ ಜನತೆ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ತಂದಿದ್ದಾರೆ. ಪ್ರಜಾಪ್ರಭುತ್ವ ಇದು ಉಳಿದಿದೆ.