ಕೇರಳದ ಕಣ್ಣೂರುನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮೂರು ಸಜೀವ ಬಾಂಬ್ಗಳು ಪತ್ತೆಯಾಗಿದ್ದು ಪೊಲೀಸರು ಬಾಂಬ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಣ್ಣೂರಿನ ಬಿಜೆಪಿ ಕಚೇರಿಯಲ್ಲಿ ಮೂರು ಬಾಂಬ್ಗಳು ಪತ್ತೆಯಾಗುತ್ತಿದ್ದಂತೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಬಾಂಬ್ ನಿಷ್ಟ್ರೀಯ ದಳದೊಂದಿಗೆ ಆಗಮಿಸಿ ಬಾಂಬ್ಗಳನ್ನು ನಿಷ್ಟ್ರೀಯಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಬಿಜೆಪಿ ಕಚೇರಿಯಲ್ಲಿ ಬಾಂಬ್ ಇರಿಸಿದ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಮೂಲಗಳು