ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ ಬೆನ್ನಲ್ಲೇ ಬಿಜೆಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರನ್ನು ನಿನ್ನೆ ಘೋಷಣೆ ಮಾಡಿತ್ತು. ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ