ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನೋಟು ನಿಷೇಧ ಬಹುದೊಡ್ಡ ಹಗರಣವಾಗಿದೆ. ಜನೆವರಿ 1 ರಿಂದ ದೇಶಾದ್ಯಂತ ಮೋದಿ ಹಟಾವೋ ದೇಶ ಬಚಾವೋ ಘೋಷಣೆಯೊಂದಿಗೆ ಹೋರಾಟ ಆರಂಭಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ದೇಶದಲ್ಲಿ ಕೋಮುವಾದ ಹರಡಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನದಲ್ಲಿರುವ ವ್ಯಕ್ತಿಯ ಕೈಯಲ್ಲಿ ದೇಶ ಸುರಕ್ಷಿತವಾಗಿರುವುದಿಲ್ಲ ಎನ್ನುವುದು ಖಾತರಿಯಾಗಿದ್ದರಿಂದ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳೆಗಿಳಿಯುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.