ಬೆಳಗಾವಿ : 2 ವರ್ಷಗಳ ಬಳಿಕ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಇಂದು ಭಕ್ತರು ಭಾರತ ಹುಣ್ಣಿಮೆ ಸಂಭ್ರಮಾಚರಣೆ ಮಾಡಲಿದ್ದಾರೆ.ಜಿಲ್ಲೆಯ ಸವದತ್ತಿ ಹೊರವಲಯದಲ್ಲಿರುವ ಸುಪ್ರಸಿದ್ಧ ದೇವಸ್ಥಾನ ಇದಾಗಿದ್ದು, ಕೋವಿಡ್ ಹಿನ್ನೆಲೆ ದೇವಸ್ಥಾನವು 2 ವರ್ಷಗಳಿಂದ ಬಂದ್ ಆಗಿತ್ತು. ಇಂದು ಸುಮಾರು 10 ರಿಂದ 15 ಲಕ್ಷ ಭಕ್ತರು ಸೇರುವ ನಿರೀಕ್ಷೆಯಿದೆ. ಚಕ್ಕಡಿ, ಕಾರು, ವಿಶೇಷ ಬಸ್ಗಳಲ್ಲಿ ತಂಡೋಪತಂಡವಾಗಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ದಂಡು ಹರಿದುಬರುತ್ತಿದೆ.ಯಲ್ಲಮ್ಮಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ, ನೂಲಿನ