ಹೊಸದಿಲ್ಲಿ : ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾಕಾರ ರೈತರ ಮೇಲೆ ಎಸ್ಯುವಿ ಹರಿದ ಸಂಬಂಧ ಭುಗಿಲೆದ್ದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟ ಘಟನೆಯನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಗುರುವಾರ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠ ಸ್ವಯಂಪ್ರೇರಿತವಾಗಿ ಗಣನೆಗೆ ತೆಗೆದುಕೊಂಡ ಈ ಪ್ರಕರಣದ ವಿಚಾರಣೆ ನಡೆಸಯಲಿದೆ. ಜೀವಹಾನಿಗೆ ಕಾರಣವಾದ ಘಟನೆಯಲ್ಲಿ ಸಂಬಂಧಪಟ್ಟವರನ್ನು ಇದುವರೆಗೆ ಬಂಧಿಸದ