ಲಖನೌ : ಉತ್ತರ ಪ್ರದೇಶದಲ್ಲಿ ದಾಖಲೆಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯೋಗಿ ಆದಿತ್ಯನಾಥ್, ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮಾ.25ರಂದು ಸಂಜೆ 4 ಗಂಟೆಗೆ ಲಖನೌನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಇಕಾನಾ ಸ್ಟೇಡಿಯಂನಲ್ಲಿ ನಡೆಯಲಿದ್ದು, ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ.ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿತವಾಗಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸುವ ಮೂಲಕ ಎರಡನೇ ಬಾರಿಗೆ ಅಧಿಕಾರಕ್ಕೆ ಏರಿದೆ.ಒಟ್ಟು 403 ಕ್ಷೇತ್ರಗಳ