ನವದೆಹಲಿ : ಒಡಿಶಾ ರೈಲು ದುರಂತದ ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಪೂರೈಸಿದ್ದು, ವರದಿ ನೀಡಿದ್ದಾರೆ. ಇಂಟರ್ಲಾಕ್ ಸಿಸ್ಟಮ್ ಸಮಸ್ಯೆಯಿಂದಾಗಿ ಒಡಿಶಾ ರೈಲು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಬಗ್ಗೆ ಕಿರಿಯ ಅಧಿಕಾರಿಗಳು ಫೆಬ್ರವರಿ 9 ರಂದು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ. ಇದರಿಂದಾಗಿ ತೊಂದರೆ ಸಂಭವಿಸಿರುವ ಸಾಧ್ಯತೆಗಳ ಬಗ್ಗೆ