ಮೈಸೂರು : ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಡುಕ ಕಾಂಗ್ರೆಸ್ ನಾಯಕರಲ್ಲಿ ಮೂಡಿದೆ. ಹೀಗಾಗಿಯೇ ಅವರು ಬಿಜೆಪಿಯಿಂದ ಕೆಲವು ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂಬ ಸುದ್ದಿ ಹರಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು. ರಾಷ್ಟ್ರಮಟ್ಟದಲ್ಲೇ ಕಾಂಗ್ರೆಸ್ ಒಡೆದು ಹೋಗಿದೆ. ಅಲ್ಲಿ ಯಾರು ನಾಯಕರು ಎಂಬುದೇ ಗೊತ್ತಾಗುತ್ತಿಲ್ಲ. ಎಲ್ಲರೂ ಮುಖ್ಯಮಂತ್ರಿ ಆಗಬೇಕು ಎಂದು ಪ್ರಯತ್ನಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಎಂದೆಂದೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ