ನವದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ. ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.ಇಂದು ಸಂಜೆಯಷ್ಟೇ ವಿಪಕ್ಷಗಳು