ಭೋಪಾಲ್ : ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ (32) ತನ್ನ ನಾಲ್ಕನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಧ್ಯಪ್ರದೇಶ ಇಂದೋರ್ ನಗರ ಪೊಲೀಸರು ತಿಳಿಸಿದ್ದಾರೆ.ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯಿದೆಯು ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುತ್ತದೆ. ಇಂತಹ ಪ್ರಕರಣಗಳಲ್ಲಿ ಆರೋಪಿಗೆ 3 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಸಂತ್ರಸ್ತ ಮಹಿಳೆ ಹಾಗೂ ಆರೋಪಿ ಇಮ್ರಾನ್ ಸಂರ್ಪಕಕ್ಕೆ ಬಂದು ನಂತರ ಮದುವೆಯಾಗಿದ್ದರು