ಅತೀ ವೇಗವಾಗಿ ಬಂದ ಲಾರಿಯೊಂದು ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಜಜ್ಜಾರ್ ನ ಕುಂಡ್ಲಿ-ಮನೆಸರ್-ಪಲ್ವಾರ್ (ಕೆಎಂಪಿ) ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ರಸ್ತೆ ದುರಸ್ಥಿ ಕೆಲಸ ಮಾಡಲು ಬಂದಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಯ ಮಾಹಿತಿ ಕಲೆ