ಅಣ್ಣಾಡಿಎಂಕೆ ಎರಡು ಎಲೆಯ ಚಿಹ್ನೆಯನ್ನ ಪಡೆಯಲು ಮಧ್ಯವರ್ತಿ ಮೂಲಕ ಲಂಚದ ಆಮಿಷವೊಡ್ಡಿದ್ದಾರೆಂಬ ಆರೋಪವನ್ನ ಅಣ್ಣಾಡಿಎಂಕೆ ಅಮ್ಮ ಪಕ್ಷದ ಮುಖಂಡ ಟಿಟಿವಿ ದಿನಕರನ್ ತಳ್ಳಿ ಹಾಕಿದ್ದಾರೆ. ದೆಹಲಿ ಪೊಲೀಸರು ಬಂಧಿಸಿರುವ ವ್ಯಕ್ತಿ ನನಗೆ ಗೊತ್ತೇ ಇಲ್ಲ, ನಾನು ಅವನನ್ನ ಒಮ್ಮೆಯೂ ಸಂಪರ್ಕಿಸಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದು ರಾಷ್ಟ್ರಿಯ ಸುದ್ದಿವಾಹಿನಿಗೆ ದಿನಕರನ್ ಪ್ರತಿಕ್ರಿಯಿಸಿದ್ದಾರೆ.