ಉಗ್ರರು ಸೇನಾ ಬೆಂಗಾವಲು ಪಡೆಯ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ . ಜಮ್ಮು ಕಾಶ್ಮಿರದ ಕುಲ್ಗಾಮಾದಲ್ಲಿ ಉಗ್ರರು ಸೇನಾಪಡೆಗಳ ಮೇಲೆ ನಡೆಸಿದ ದಾಳಿಯಲ್ಲಿ ಆರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸೇನಾಪಡೆಗಳ ಮೇಲೆ ದಾಳಿ ನಡೆಸಿದ್ದು ನಾವೇ ಎಂದು ಹಿಜ್ಬುಲ್ ಮುಜಾಹಿದಿನ್ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ದಾಳಿ