ಮುಂಬೈ : ಸಾವರ್ಕರ್ ಅವರನ್ನು ಅವಮಾನಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು ಉಂಟಾಗಲಿದೆ ಎಂದಿದ್ದಾರೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರನ್ನು ಮಾದರಿಯಾಗಿ ಪರಿಗಣಿಸುತ್ತೇವೆ. ಅವರನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಸಾವರ್ಕರ್ ಅಂಡಮಾನ್ ಜೈಲಿನಲ್ಲಿ 14 ವರ್ಷಗಳ ಕಾಲ ಸೆರೆವಾಸದಲ್ಲಿ ಚಿತ್ರಹಿಂಸೆ ಅನುಭವಿಸಿದ್ದನ್ನು ನಾವು ಓದಬಹುದು.