Widgets Magazine

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಉದ್ದವ್ ಠಾಕ್ರೆ ಹೆಸರು ಘೋಷಣೆ

ಮಹಾರಾಷ್ಟ್| pavithra| Last Modified ಬುಧವಾರ, 27 ನವೆಂಬರ್ 2019 (09:23 IST)
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಶಿವಸೇನೆಯ ನಾಯಕ  ಉದ್ದವ್ ಠಾಕ್ರೆ ಅವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ  ನಂತರ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸುದೀರ್ಘ ಚರ್ಚೆ ನಡೆಸಿದ್ದು, ಬಳಿಕ ಶಿವಸೇನೆಯ ನಾಯಕ  ಉದ್ದವ್ ಠಾಕ್ರೆ ಅವರನ್ನು ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿವೆ. ಹಾಗೇ ನವೆಂಬರ್ 28ಕ್ಕೆ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದ  ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.


ಅಲ್ಲದೇ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಒಂದೊಂದು ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಎನ್ ಸಿಪಿಯ ನಾಯಕ ಜಯಂತ್ ಪಾಟೀಲ್ ಮತ್ತು ಕಾಂಗ್ರೆಸ್ ನ ಹಿರಿಯ ನಾಯಕ ಬಾಳಾಸಾಹೇಬ್ ಥೋರಾತ್ ಗೆ ಡಿಸಿಎಂ ಸ್ಥಾನ ಖಚಿತ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :