ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ನಾಳೆ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಭಾನುವಾರ (ಸೆ.17) ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ