ಕೇಂದ್ರ ರೈಲ್ವೆ ಹಾಗೂ ಸಂವಹನ ಇಲಾಖೆ ಸಹಾಯಕ ಸಚಿವ ಮನೋಜ್ ಸಿನ್ಹಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಸಿನ್ಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರ ಬಳಿ ಶುಕ್ರವಾರ ಈ ಘಟನೆ ನಡೆದಿದೆ.