ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮಳೆ ಅವಾಂತರ ಸೃಷ್ಠಿಯಾಗಿದ್ದು, ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾನುವಾರ ಸ್ಪಷ್ಟೀಕರಣ ನೀಡಿದೆ. `ರಾಮನಗರ ಸಮೀಪದ ಗ್ರಾಮಸ್ಥರು ಚರಂಡಿಯ ಮಾರ್ಗವನ್ನು ತಡೆಹಿಡಿದಿದ್ದರು. ಆದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುವಂತಾಗಿತ್ತು’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ರಾಮನಗರದ ಬಳಿಯಿರುವ ಮಾದಾಪುರ ಗ್ರಾಮಸ್ಥರು ಹಾಗೂ ಇತರರು ತಮ್ಮ ಕೃಷಿ ಜಮೀನು ಮತ್ತು ಗ್ರಾಮಕ್ಕೆ ಅಡ್ಡದಾರಿ ನಿರ್ಮಿಸಿಕೊಂಡು, ಆ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದರು.ಅದಕ್ಕಾಗಿ