Widgets Magazine

ಕೊರೊನಾಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ

ನವದೆಹಲಿ| pavithra| Last Updated: ಗುರುವಾರ, 24 ಸೆಪ್ಟಂಬರ್ 2020 (07:26 IST)
ನವದೆಹಲಿ : ದೇಶದಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಇದೀಗ ಕೊರೊನಾವೈರಸ್ ನಿಂದ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ನಿಧನರಾಗಿದ್ದಾರೆ.

ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ಆದರೆ ಚಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಸಭಾ ಸಂಸದ ಅಶೋಕ್ ಗಸ್ತಿ ಕೊರೊನಾಗೆ ಬಲಿಯಾಗಿದ್ದರು. ಈ ನೋವಿನಿಂದ ಬಿಜೆಪಿ ಸುಧಾರಿಸಿಕೊಳ್ಳುವ ಮುನ್ನವೇ ಇದೀಗ ಮತ್ತೊಬ್ಬ ಸಚಿವರು ಸಾವನಪ್ಪಿದ್ದು ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :