ಲಕ್ನೋ : ರಾಜ್ಯದಲ್ಲಿ ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉತ್ತರ ಪ್ರದೇಶ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ.ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಅವರು, ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲಿದೆ