ಉತ್ತರ ಪ್ರದೇಶದಲ್ಲಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ ಸಮರ ಮುಂದುವರಿದಿದ್ದರೂ ಅದನ್ನು ಲಗತ್ತಿಸಿದವರು ಯಾರು ಎನ್ನುವುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ. ಕಳೆದ ಕೆಲ ದಿನಗಳ ಹಿಂದೆ ರಾಯಬರೇಲಿ ಮತ್ತು ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ಗಳು ಕಂಡುಬಂದಿದ್ದವು. ಇದೀಗ ಪ್ರಧಾನಿ ಮೋದಿ ಕಾಣೆಯಾಗಿದ್ದಾರೆ ಎನ್ನುವ ಪೋಸ್ಟರ್ಗಳು ವಾರಣಾಸಿಯಲ್ಲಿ ಕಂಡು ಬರುತ್ತಿವೆ. ಮೂಲಗಳ ಪ್ರಕಾರ, ಶುಕ್ರವಾರ ರಾತ್ರಿ ವಾರಣಾಸಿ