ನವದೆಹಲಿ : ಇತ್ತೀಚೆಗೆ ವಿಮಾನಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್ ಬಳಿಕ ಇದೀಗ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಅಮೇರಿಕನ್ ಏರ್ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.ಎಎ292 ಅಮೆರಿಕನ್ ಏರ್ಲೈನ್ಸ್