ಭೋಪಾಲ್ : ವಾರದ ಆರಂಭದಲ್ಲಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದ ನಾಲ್ಕು ವರ್ಷದ ಬಾಲಕಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಅವರು,ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು. ಈ ರೀತಿಯ ಕಠಿಣ ಶಿಕ್ಷೆ ನೀಡುವುದರಿಂದ ಮತ್ತೆ ಇಂತಹ ಕೃತ್ಯವೆಸಗಲು ಯಾರೂ ಧೈರ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯಪ್ರದೇಶ ಸರ್ಕಾರವು ಇಂತಹ ಅನಾಗರಿಕ ಕೃತ್ಯಗಳ ವಿರುದ್ಧ ಕಠಿಣವಾಗಿ ಮತ್ತು ಎಚ್ಚರದಿಂದ ವ್ಯವಹರಿಸುತ್ತಿದೆ.