ಲಕ್ನೋ : ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಗೆ ಉತ್ತರ ಪ್ರದೇಶದ 53 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾವು ಮೊದಲ ಪಟ್ಟಿಯಲ್ಲಿ 53 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ.ಉಳಿದ 5 ಸ್ಥಾನಗಳನ್ನು ನಾವು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ