ಮೈನ್ಪುರಿ: ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಘಟನೆ ಇದು. ರಕ್ಷಣೆ ನೀಡಬೇಕಾದ ಪೊಲೀಸರೆ ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉತ್ತರ ಪ್ರದೇಶದ ಕರ್ಹಾಲ್ ಗೇಟ್ ಪೊಲೀಸ್ ಠಾಣೆಯಲ್ಲಿ ಇಂತದ್ದೊಂದು ಘಟನೆ ನಡೆದಿದ್ದು, ಕಿರುಕುಳಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಇಬ್ಬರು ಸಹೋದರಿಯರಿಗೆ ಪೊಲೀಸ್ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ. ಅದರ ವಿಡಿಯೋ ಇದೀಗ ವೈರಲ್ ಆಗಿದೆ. ಠಾಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು