ಮೈಸೂರು : ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹಾಗೆಂದು, ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಆದರೆ, ಈ ಫಲಿತಾಂಶದಿಂದ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತದೆ. ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬೇಸರಗೊಂಡಿದ್ದಾರೆ. ಹೀಗಾಗಿ ಜನರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸುತ್ತಾರೆ ಎಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಜೆಡಿಎಸ್ನವರು