ಚಂಡೀಗಢ : ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಪ್ರತಿಭಟನೆಯಿಂದಾಗಿ ನಾಳೆಯಿಂದ ಎರಡು ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಸೆಪ್ಟೆಂಬರ್ 19, 20 ರಂದು ರಜೆ ಘೋಷಿಸಲಾಗಿದ್ದು, ಪಾಠ-ಪ್ರವಚನಗಳನ್ನು ನಡೆಸದಂತೆ ಸೂಚಿಸಲಾಗಿದೆ. ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಘಟನೆಗೆ ನಿಖರ ಕಾರಣವನ್ನು ವರದಿ ಮಾಡುವಂತೆ ವಿಶ್ವವಿದ್ಯಾಲಯವು ಸೂಚಿಸಿದೆ.ಉಳಿದಂತೆ ಅಗತ್ಯ ಸೇವೆಗಳು ಲಭ್ಯವಿರಲಿದೆ ಎಂದು ವಿವಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾವಿರಾರು ಸಂಖ್ಯೆಯ