ನವದೆಹಲಿ: ಚಂದ್ರಯಾನ-3 ಕಾರ್ಯಾಚರಣೆಯ ಕೊನೆ ಹಂತದ ಭಾಗವಾಗಿ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಬೇರ್ಪಡಿಸುವ ಕಾರ್ಯ ಗುರುವಾರ ಯಶಸ್ವಿಯಾಗಿ ನಡೆದಿತ್ತು. ಅದರ ಬೆನ್ನಲ್ಲೇ ಇಂದು ಮತ್ತೊಂದು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಲಾಗಿದೆ.