ಮಣಿಪುರ ಹಿಂಸಾಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಂದೆ-ಮಗ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಮುಂಜಾನೆಯಿಂದ ಬಿಷ್ಣುಪುರ್-ಚುರಾಚಂದ್ಪುರ ಗಡಿ ಪ್ರದೇಶಗಳಲ್ಲಿ ಹಗಲಿಡೀ ನಡೆದ ದಾಳಿಗಳಲ್ಲಿ ಸುಮಾರು 16 ಜನರು ಗಾಯಗೊಂಡಿದ್ದಾರೆ .ಸೇನೆಯು ಈ ಪ್ರದೇಶದಲ್ಲಿ ಪ್ರಮುಖ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ ಮತ್ತು