ಚಂಡೀಗಢ : ಹರಿಯಾಣದ ಮೇವತ್ ಪ್ರದೇಶದ ನಂದ್ಗ್ರಾಮ್ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ. ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್ ಗಾರ್ಡ್ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ