ಬೀಜಿಂಗ್ : ಚೀನಾದ ಪ್ರಜೆಗಳಿಗೆ ನೀಡಲಾಗಿದ್ದ ಪ್ರವಾಸಿ ವೀಸಾವನ್ನು ಅಮಾನತುಗೊಳಿಸಿ ಬಿಸಿ ಮುಟ್ಟಿಸಿದ ಬಳಿಕ ಈಗ ಭಾರತೀಯ ವಿದ್ಯಾರ್ಥಿಗಳಿಗೆ ದೇಶಕ್ಕೆ ಮರಳಲು ಚೀನಾ ಅನುಮತಿ ನೀಡಿದೆ. ಕೋವಿಡ್ ಕಾರಣದಿಂದಾಗಿ ಬೀಜಿಂಗ್ ವೀಸಾ ಹಾಗೂ ವಿಮಾನ ನಿರ್ಬಂಧಗಳನ್ನು ವಿಧಿಸಿತ್ತು. ಇದೀಗ 2 ವರ್ಷಗಳ ಬಳಿಕ ಚೀನಾದಲ್ಲಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ತೆರಳಿದ್ದ ವಿದ್ಯಾರ್ಥಿಗಳಿಗೆ ಚೀನಾ ಮರಳುವಂತೆ ಅನುಮತಿ ನೀಡಿದೆ. ಶುಕ್ರವಾರ ಚೀನಾ ವಿದ್ಯಾರ್ಥಿಗಳಿಗೆ ಮರಳಲು ಅನುಮತಿ ನೀಡುವ ಯೋಜನೆಯನ್ನು ಪ್ರಕಟಿಸಿದೆ.