ಬೆಂಗಳೂರು : ರಾಜ್ಯ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿ 20 ದಿನಗಳೇ ಕಳೆದಿದ್ದರೂ ಸಂಪುಟ ರಚನೆಯಾಗಿಲ್ಲ. ಈ ಬಗ್ಗೆ ವಿರೋಧಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಿನ್ನೆ ದೆಹಲಿಗೆ ತೆರಳಿರುವ ಯಡಿಯೂರಪ್ಪ ಇಂದು ರಾಜ್ಯ ಸಂಪುಟ ವಿಸ್ತರಣೆಯ ಬಗ್ಗೆ ಪ್ರಧಾನಿಯ ಜೊತೆ ಚರ್ಚಿಸಲಿದ್ದಾರೆ. ರಾಜ್ಯ ಸಂಪುಟ ವಿಸ್ತರಣೆ