ಚೆನ್ನೈ, ಆಗಸ್ಟ್ 31: ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕರಿಗೆ ಭಾನುವಾರದಂದು ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಿರುವುದಾಗಿ ಘೋಷಿಸಿದ್ದು, ವಾರಾಂತ್ಯದಲ್ಲಿ ಪೂಜಾ ಸ್ಥಳಗಳಲ್ಲಿನ ನಿಷೇಧವನ್ನು ವಿಸ್ತರಿಸಿದೆ. ಧಾರ್ಮಿಕ ಉತ್ಸವಗಳ ಮೇಲೆ ನಿರ್ಬಂಧ ಹೇರಲಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 15, ಬೆಳಿಗ್ಗೆ 6ರವರೆಗೂ ಈ ನಿರ್ಬಂಧಗಳು ಜಾರಿಯಲ್ಲಿರುತ್ತದೆ ಎಂದು ಅಧೀಕೃತ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರ