ಲೈಂಗಿಕ ಕಿರುಕುಳ ವಿರೋಧಿಸಿದ ಹುಡುಗಿಗೆ ಕಾಮುಕರು ಮಾಡಿದ್ದೇನು?

ಲಕ್ನೋ| pavithra| Last Modified ಭಾನುವಾರ, 25 ಅಕ್ಟೋಬರ್ 2020 (09:55 IST)
ಲಕ್ನೋ : ಲೈಂಗಿಕ ಕಿರುಕುಳ ನೀಡಿದ್ದನ್ನು ವಿರೋಧಿಸಿದ್ದಕ್ಕೆ 16 ವರ್ಷದ ಹುಡುಗಿಯನ್ನು ಮೂವರು ಯುವಕರು ಸೇರಿ ಗುಂಡಿಕ್ಕಿ ಕೊಂದ ಘಟನೆ ಫಿರೋಜಾಬಾದ್ ನಲ್ಲಿ ನಡೆದಿದೆ.

12 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗಿ ಶಾಲೆ ಮುಗಿಸಿ ಮನೆಗೆ ಬರುತ್ತಿರುವಾಗ ದಾರಿಯಲ್ಲಿ ಮೂವರು ಯುವಕರು ಲೈಂಗಿಕ ಕಿರುಕುಳ ನೀಡುತ್ತಾ ಅಸಭ್ಯವಾಗಿ ವರ್ತಿಸಿದ್ದಾರೆ. ಇದಕ್ಕೆ ಹುಡುಗಿ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಯುವಕರು ಹುಡುಗಿ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಮನೆಗೆ ನುಗ್ಗಿ ಮನೆಯವರನ್ನು ಥಳಿಸಿ ಹುಡುಗಿಗೆ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :