ಬಹ್ರೇಚ್ : ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ 23 ವರ್ಷದ ಯುವಕನನ್ನು ಥಳಿಸಿದ ಘಟನೆ ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯಲ್ಲಿ ನಡೆದಿದೆ. ಯುವಕ ತನ್ನ ಚಿಕ್ಕಪ್ಪನ ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಆ ವೇಳೆ 5 ಮಂದಿ ನೆರೆಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೋಲುಗಳಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಯುವಕನ ಚಿಕ್ಕಪ್ಪ ಆರೋಪಿಗಳ ವಿರುದ್ಧ ದೂರು ನೀಡಿದ